Dars-e-Hadees

 Live Makkah

Live Madinah

Dars-e-Hadees

africa
starway
Download Free Templates http://bigtheme.net/ Websites Templates

ಉತ್ತರ ಕನ್ನಡ ಗಲಭೆ: ಸೋಷಿಯಲ್ ಮೀಡಿಯಾ ಮೇಲೆ ನಿಗಾ. 106 ಪ್ರಕರಣ ದಾಖಲು

ಕಾರವಾರ: 14 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್‌ಬುಕ್ ಮತ್ತು ಆನ್‌ಲೈನ್ ಸುದ್ದಿ

ಜಾಲತಾಣಗಳಲ್ಲಿ ಹೊನ್ನಾವರದ ಪರೇಶ್ ಮೇಸ್ತ ಸಾವಿನ ಕುರಿತಾಗಿ ಸುಳ್ಳು ವದಂತಿಗಳನ್ನು ಸೃಷ್ಟಿಸುತ್ತ, ಪ್ರಸಾರ ಮಾಡುತ್ತಾ, ಶೇರ್ ಮಾಡುತ್ತಿರುವವರ ವಿರುದ್ಧ ಇದುವರೆಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 106 ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಆರೋಪಿತರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸಾವಿನ ಕುರಿತಾಗಿ ಸುಳ್ಳು ವದಂತಿಗಳನ್ನು ಸೃಷಿಸಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ನಿರಂತರವಾಗಿ ಭಂಗ ತರುತ್ತಾ ಪ್ರಚೋದನಾಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಹಾಗೂ ಶೇರ್ ಮಾಡುವುದು ಒಂದು ಗಂಭೀರವಾದ ಅಪರಾಧವಾಗಿರುತ್ತದೆ. ಈಗಾಗಲೇ ಇಂತಹ ಕಿಡಿಗೇಡಿಗಳ ವಿರುದ್ದ ಭಾರತ ದಂಡ ಸಂಹಿತೆ ಕಲಂ 153, 153(ಎ), 505, 295(ಎ), 504, 506 ಐ.ಪಿ.ಸಿ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ 2008 ನೇದರಂತೆ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ ಹಲವಾರು ಆರೋಪಿತರನ್ನು ಈಗಾಗಲೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ಕಿಡಿಗೇಡಿಗಳು ತಮ್ಮ ವಿಕೃತ ಮನೋಕಾಮನೆಗಳನ್ನು ತೀರಿಸಿಕೊಳ್ಳಲು ಸಾಮಾಜಿಕ ಜಾಲತಾಣಗಳನ್ನು ಬಳಸುತ್ತಿದ್ದು, ಅಂತಹವರ ವಿರುದ್ದ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಉನ್ನತ ಮಟ್ಟದಲ್ಲಿ ಇಂಟರನೆಟ್ ಹಾಗೂ ಸೋಷಿಯಲ್ ಮೀಡಿಯಾ ಮೊನಿಟರಿಂಗ್ ತಂತ್ರಾಂಶದ ಮೂಲಕ ನಿರಂತರವಾಗಿ ತೀವ್ರ ನಿಗಾ ಇರಿಸಿದೆ.

ಈ ರೀತಿ ವಾಟ್ಸಪ್, ಫೇಸ್‌ಬುಕ್ ಮತ್ತು ಆನ್‌ಲೈನ್ ಸುದ್ದಿ ಜಾಲತಾಣಗಳಲ್ಲಿ ಹಿಂದೂ ಹಾಗೂ ಮುಸ್ಲಿಂ ಭಾವೈಕ್ಯತೆಯನ್ನು ಹಾಳುಗಡವುತ್ತಾ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ, ಸಾರ್ವಜನಿಕ ನೆಮ್ಮದಿಗೆ ಭಂಗ ತರುತ್ತಿರುವವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ಆದ್ದರಿಂದ ಈ ಮೂಲಕ ಎಲ್ಲ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ಹಾಗೂ ಪ್ರಚೋದನಾಕಾರಿ ಸಂದೇಶಗಳಿಗೆ ಕಿವಿಗೊಡದೇ ಯಾವುದು ಸತ್ಯ, ಯಾವುದು ಸುಳ್ಳು ಎಂದು ಅಧಿಕೃತವಾಗಿ ಮಾಹಿತಿ ಪಡೆದುಕೊಳ್ಳದೇ ಕೇವಲ ವಾಟ್ಸಾಪ್, ಫೇಸ್‌ಬುಕ್ ಮತ್ತು ಆನ್‌ಲೈನ್ ಸುದ್ದಿ ಜಾಲತಾಣಗಳಲ್ಲಿ ಪ್ರಸಾರವಾಗುವ ಮಾಹಿತಿಗಳನ್ನು ನಂಬಬಾರದು. ಸಮಾಜದಲ್ಲಿ ಶಾಂತಿಯನ್ನು ಕಾಪಾಡಬೇಕು ಎಂದು ಕೋರಿದ್ದಾರೆ. ಅದೇ ರೀತಿ ಸುಳ್ಳು ವದಂತಿಗಳನ್ನು ಹರಡುತ್ತಾ, ಶೇರ್ ಮಾಡುತ್ತಾ ಸಾಮಾಜಿಕ ಸಾಮರಸ್ಯವನ್ನು ಹಾಳು ಮಾಡುತ್ತಿರುವ ಕಿಡಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕ, ಕ ವರದಿ

Read 13 times

Recent Videos

Category: Religious
Views: 138
Category: Religious
Views: 75
Category: Religious
Views: 38