Dars-e-Hadees

 Live Makkah

Live Madinah

Dars-e-Hadees

africa
starway
Download Free Templates http://bigtheme.net/ Websites Templates

ಇಡೀ ಕರ್ನಾಟಕಕ್ಕೆ ಇನ್ಮುಂದೆ ಶಿರಸ್ತ್ರಾಣ ಕಡ್ಡಾಯ

ಇಡೀ ಕರ್ನಾಟಕಕ್ಕೆ ಇನ್ಮುಂದೆ ಶಿರಸ್ತ್ರಾಣ ಕಡ್ಡಾಯ

 

ಬೆಂಗಳೂರು, 01 Feb(Fikrokhabar./sources): ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಫೆಬ್ರವರಿ 1 ರಿಂದ ಹೆಲ್ಮೆಟ್ ಕಡ್ಡಾಯ ಕಾನೂನು ಜಾರಿಯಾಗಿದೆ. ಸುಪ್ರೀಂಕೋರ್ಟ್‌ ಆದೇಶದನ್ವಯ ರಾಜ್ಯದಲ್ಲಿ ದ್ವಿಚಕ್ರ ವಾಹನದ ಹಿಂಬದಿ ಸವಾರರೂ ಹೆಲ್ಮೆಟ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದ್ದರೂ ಕೆಲ ಜಿಲ್ಲೆಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಇನ್ನು ಮುಂದೆ ಎಲ್ಲ ಕಡೆ ಏಕರೂಪದ ನಿಯಮ ಅನ್ವಯವಾಗಲಿದೆ. ಬೆಂಗಳೂರು ಸೇರಿದಂತೆ ಹಲವು ಮಹಾನಗರಗಳಲ್ಲಿ ಜನವರಿ 21ರಿಂದಲೇ ನಿಯಮ ಉಲ್ಲಂಘನೆಗೆ ಪೊಲೀಸರು ದಂಡ ವಿಧಿಸಲಾಗುತ್ತಿದೆ. ಬೆಳಗಾವಿ ಸೇರಿದಂತೆ ಕೆಲ ಜಿಲ್ಲೆಗಳಿಗೆ ವಿನಾಯಿತಿ ನೀಡಲಾಗಿತ್ತು. ಇದೀಗ ಪೊಲೀಸರು ಜಾಗೃತಿ ಕಾರ್ಯಕ್ರಮವನ್ನು ಅಂತ್ಯ ಮಾಡಿದ್ದು ಹೆಲ್ಮೆಟ್ ಕಡ್ಡಾಯ ನೀತಿ ಜಾರಿಗೆ ಬಂದಿದೆ.

ಬೆಂಗಳೂರು ನಗರ, ಗ್ರಾಮಾಂತರ, ಉತ್ತರ ಕನ್ನಡ, ಯಾದಗಿರಿ, ಬೀದರ್‌, ರಾಮನಗರ, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಜ.21ರಿಂದಲೇ ನಿಯಮ ಉಲ್ಲಂಘನೆಗೆ ದಂಡ ವಿಧಿಸಲಾಗುತ್ತಿದೆ. ಶಿವಮೊಗ್ಗ, ರಾಯಚೂರು ಜಿಲ್ಲೆಗಳಲ್ಲಿ ಜನವರಿ 25ರಿಂದ ಕಡ್ಡಾಯ ಮಾಡಲಾಗಿದೆ. ತುಮಕೂರು, ದಕ್ಷಿಣ ಕನ್ನಡ, ಬಾಗಲಕೋಟೆ, ಉಡುಪಿ, ಕೊಡಗು, ಮೈಸೂರು, ಹುಬ್ಬಳ್ಳಿ-ಧಾರವಾಡ, ದಾವಣಗೆರೆ, ಚಿತ್ರದುರ್ಗ, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಹಾವೇರಿ, ಗದಗ ಮತ್ತು ಇನ್ನುಳಿದ ಜಿಲ್ಲೆಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದೀಗ ಆದೇಶ ಪರಿಪಾಲನೆಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದ್ದು ಇಡೀ ರಾಜ್ಯ ಹೆಲ್ಮೆಟ್ ಕಡ್ಡಾಯದ ಅಡಿ ಬಂದಿದೆ.

Read 39 times

Recent Videos

Category: Religious
Views: 145
Category: Religious
Views: 77
Category: Religious
Views: 42