Dars-e-Hadees

 Live Makkah

Live Madinah

Dars-e-Hadees

africa
starway
Download Free Templates http://bigtheme.net/ Websites Templates

ಬುರುಡೆ ಬಿಎಸ್ವೈ, ಬುಟ್ಟಿಲಿ ಹಾವಿಲ್ಲದಿದ್ದರೂ ಪುಂಗಿ ಊದುವುದನ್ನು ನಿಲ್ಸಲ್ಲ : ಸಿದ್ದು ಗುದ್ದು

ಕೊಪ್ಪಳ: 14 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್,ಯಡಿಯೂರಪ್ಪ ಹಗರಣದ ದಾಖಲೆ ಬಿಡುಗಡೆ

ಮಾಡುತ್ತೇನೆ ಎಂದು ಬುಟ್ಟಿಯಲ್ಲಿ ಇಲ್ಲದ ಹಾವನ್ನು ಬಿಡುವುದಾಗಿ ಬುರುಡೆ ಬಿಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗೇಲಿ ಮಾಡಿದ್ದಾರೆ. ಕುಷ್ಟಗಿಯಲ್ಲಿ ಸರ್ಕಾರದ ಸಾಧನೆ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಧಿವೇಶನದ ವೇಳೆ ಹಗರಣದ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿಕೊಂಡಿದ್ದರು. ಅವರ ಬುಟ್ಟಿಯಲ್ಲಿ ಹಾವೇ ಇಲ್ಲ, ಸುಮ್ಮನೇ ಬುರುಡೆ ಬಿಡುತ್ತಾರೆ ಎಂದು ಲೇವಡಿ ಮಾಡಿದರು. ಇಂದಿರಾಗಾಂಧಿ ಜೈಲಿಗೆ ಹೋಗಿದ್ದರು ಎಂಬುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಇಂದಿರಾಗಾಂಧಿಯವರು ತುರ್ತು ಪರಿಸ್ಥಿತಿಯಲ್ಲಿ ಜೈಲಿಗೆ ಹೋಗಿದ್ದರು. ಆದರೆ, ಯಡಿಯೂರಪ್ಪನವರು ಚೆಕ್ ಮೂಲಕ ಲಂಚ ಪಡೆದು ಜೈಲಿಗೆ ಹೋಗಿದ್ದಾರೆ ಎಂದು ತಿರುಗೇಟು ನೀಡಿದರು. ಯಡಿಯೂರಪ್ಪ ಮೇಲೆ 42 ಪ್ರಕರಣಗಳಿವೆ. ಮೊದಲು ಅವುಗಳಿಂದ ಹೊರಬರಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.

ಕೋಮು ಸೌಹಾರ್ದತೆ ಕೆದಕುವ ಮೂಲಕ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ನಮ್ಮ ಸರ್ಕಾರದ ವಿರುದ್ಧ ಹೋರಾಟ ಮಾಡುವುದಕ್ಕೆ ಬಿಜೆಪಿಯವರಿಗೆ ಯಾವುದೇ ವಿಷಯ ಇಲ್ಲ. ಹಾಗಾಗಿ ರಾಜ್ಯದಲ್ಲಿ ಕೋಮು ಪ್ರಚೋದನೆ ಮಾಡುತ್ತಿದ್ದಾರೆ ಎಂದು ಗುಡುಗಿದರು. ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಅವರ ಕುಟುಂಬದ ಒತ್ತಡದ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ವಹಿಸಲಾಗಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ. ಆಗ ನಿಜಾಂಶ ಎಲ್ಲರಿಗೂ ಗೊತ್ತಾಗಲಿದೆ ಎಂದು ಹೇಳಿದರು.

ನಾನು ಯಾವುದೇ ಧರ್ಮದ ವಿರೋಧಿಯೂ ಅಲ್ಲ. ಧರ್ಮ ಒಡೆಯುವಂತಹ ಕೆಲಸವನ್ನು ಮಾಡುತ್ತಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರ ಹೆಸರು ಹೇಳದೆ ಪರೋಕ್ಷವಾಗಿ ಟಾಂಗ್ ನೀಡಿದರು. ಲಿಂಗಾಯತ ಧರ್ಮ ಪ್ರತ್ಯೇಕ ಧರ್ಮಕ್ಕಾಗಿ ಮನವಿ ಮಾಡಿದ್ದಾರೆ. ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಕೋರಿದ್ದರು. ಹಾಗಾಗಿ ನೀವೆಲ್ಲ ಒಂದಾಗಿ ಬನ್ನಿ ಎಂದಿದ್ದೆ. ಆದರೆ ಅವರು ಬರಲಿಲ್ಲ ಎಂದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎಸ್.ಆರ್.ಪಾಟೀಲ್, ದಿನೇಶ್ ಗುಂಡೂರಾವ್, ಸಚಿವ ಬಸವರಾಜ ರಾಯರೆಡ್ಡಿ, ಶಾಸಕ ರಾಘವೇಂದ್ರ ಹಿಡ್ನಾಳ, ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಮತ್ತಿತರರು ಪಾಲ್ಗೊಂಡಿದ್ದರು.

ಈ, ಸಂ ವರದಿ

Read 6 times

Recent Videos

Category: Religious
Views: 138
Category: Religious
Views: 75
Category: Religious
Views: 38