Dars-e-Hadees

 Live Makkah

Live Madinah

Dars-e-Hadees

africa
starway
Download Free Templates http://bigtheme.net/ Websites Templates

ಕೋಮುಗಲಭೆ ನಿಯಂತ್ರಣ: ಅಧಿಕಾರಿಗಳೊಂದಿಗೆ ರೆಡ್ಡಿ ಸಭೆ

ಬೆಂಗಳೂರು: 14 ಡಿಸೆಂಬರ್(ಫಿಕ್ರೋಖಬರ್ ಸುದ್ದಿ)ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿ,ಯಾವುದೇ ರೀತಿಯ ಅಹಿತಕರ

ಘಟನೆಗಳಿಗೆ ಅವಕಾಶವಾಗದಂತೆ ಬಿಗಿಕ್ರಮಗಳನ್ನು ಕೈಗೊಳ್ಳುವ ಸಂಬಂಧ ಗೃಹ ಸಚಿವ ರಾಮಲಿಂಗಾರೆಡ್ಡಿ ಬರುವ ವಾರ ರಾಜ್ಯದ ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆ ಭುಗಿಲೆದ್ದ ಹಿನ್ನೆಲೆಯಲ್ಲಿ ರಾಜ್ಯದ ಬೇರೆಡೆ ಯಾವುದೇ ಗಲಭೆಗಳಿಗೆ ಅವಕಾಶವಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಬರುವ ಸೋಮವಾರ ಈ ಸಭೆ ನಡೆಯುವ ಸಾಧ್ಯತೆ ಇದ್ದು, ಪೊಲೀಸ್ ಮಹಾನಿರ್ದೇಶಕರು ಹಾಗೂ ಎಲ್ಲಾ ವಲಯಗಳ ಐ.ಜಿ.ಗಳು ಎಲ್ಲಾ ನಗರಗಳ ಪೊಲೀಸ್ ಆಯುಕ್ತರುಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಕೋಮುಗಲಭೆಗಳನ್ನು ನಡೆಸಲು ಬಿಜೆಪಿ ಮುಂದಾಗಿದೆ ಎಂದು ಮುಖ್ಯಮಂತ್ರಿ ಆದಿಯಾಗಿ ಕಾಂಗ್ರೆಸ್ ಮುಖಂಡರು ಈಗಾಗಲೇ ಹರಿಹಾಯ್ದಿರುವ ಬೆನ್ನಲ್ಲೇ ಗೃಹ ಸಚಿವರು ಗಲಭೆಗಳು ಆಗದಂತೆ ನೋಡಿಕೊಳ್ಳುವ ಸಂಬಂಧ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ಈ ಸಭೆಯಲ್ಲಿ ನೀಡಲಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಈಗಾಗಲೇ ಮಂಗಳೂರು, ಮೈಸೂರಿನ ಹುಣಸೂರುಗಳಲ್ಲಿ ಗಲಭೆಗಳು ನಡೆದಿದ್ದು, ಉತ್ತರ ಕನ್ನಡ ಜಿಲ್ಲೆ ಸಹ ಕೆಲ ದಿನಗಳಿಂದ ಕೋಮು ಗಲಭೆಗೆ ತತ್ತರಿಸಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವರು ಡಿ.ಜಿ., ಐ.ಜಿ.ಗಳ ಸಭೆ ಕರೆದಿದ್ದಾರೆ.
ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಕೆಲ ಸಂಘಟನೆಗಳ ಹುನ್ನಾರವನ್ನು ವಿಫಲಗೊಳಿಸಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಸಭೆಯಲ್ಲಿ ಕೆಲ ಮಹತ್ವದ ತೀರ್ಮಾನಗಳನ್ನು ಈ ಸಭೆಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವಾಲಯದ ಮೂಲಗಳು ಹೇಳಿವೆ.

ಸಂ, ವಾ ವರದಿ

Read 15 times

Recent Videos

Category: Religious
Views: 138
Category: Religious
Views: 75
Category: Religious
Views: 38