Urdu   /   English   /   Nawayathi

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ, ದಂಡ

share with us

ಬೆಂಗಳೂರು: 17 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಎಸಗಿದ್ದ ಆರೋಪಿಗೆ ನ್ಯಾಯಾಲಯ 10 ವರ್ಷಗಳ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿದೆ. ರಾಮನಗರ ಜಿಲ್ಲೆ ಕನಕಪುರದ ಕರಡಿಗುಡ್ಡದ ನಿವಾಸಿ ಆನಂದ (28) ಶಿಕ್ಷೆಗೊಳಗಾದ ಅಪರಾಧಿ. ಅಪರಾಧಿ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಲೈಂಗಿಕ ಕಿರುಕುಳ ನೀಡಿದ್ದ ಕುರಿತಂತೆ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿತ್ತು.

ಸದರಿ ಆರೋಪಿಯನ್ನು ಮಾನ್ಯ 54ನೆ ಸಿಟಿ ಸಿವಿಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಿ ವಿಚಾರಣೆಗೊಳಪಡಿಸಲಾಗಿತ್ತು. ವಾದ-ವಿವಾದ ಆಲಿಸಿದ ಸೆಷನ್ ಜಡ್ಜ್ ಎಂ.ಲತಾಕುಮಾರಿ ಅವರು ಆರೋಪಿ ಆನಂದ್‍ನನ್ನು ಅಪರಾಧಿ ಎಂದು ಘೋಷಣೆ ಮಾಡಿ ಕಲಂ 376 ಐಪಿಸಿಗೆ ಏಳು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ, 25 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದರೆ 1 ವರ್ಷ ಹೆಚ್ಚುವರಿ ಕಾರಾಗೃಹ ವಾಸ ಹಾಗೂ ಪೋಕ್ಸೋ ಕಾಯ್ದೆಯಡಿ 10 ವರ್ಷಗಳ ಕಠಿಣ ಕಾರಾಗೃಹ ವಾಸ ಮತ್ತು 25 ಸಾವಿರ ರೂ. ದಂಡ, ತಪ್ಪಿದರೆ ಹೆಚ್ಚುವರಿ ಎರಡು ವರ್ಷಗಳ ಸಾಧಾರಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಏನಿದು ಪ್ರಕರಣ: ಅಪರಾಧಿ ಆನಂದ್ ಕಳೆದ 2017 ಮಾರ್ಚ್ 10ರಂದು ಜೆಪಿ ನಗರ 6ನೆ ಹಂತದ ಜರಗನಹಳ್ಳಿ ಸಮೀಪ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಕನಕಪುರ ಸಮೀಪದ ಕಬ್ಬಾಳು ಬಳಿಯ ಲಾಡ್ಜ್‍ಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿ ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಪ್ರಾಣ ಬೆದರಿಕೆ ಹಾಕಿದ್ದ.

ಈ ಕುರಿತಂತೆ ನೊಂದ ಬಾಲಕಿಯ ಪೋಷಕರು ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪುಟ್ಟೇನಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಸರ್ಕಾರಿ ಅಭಿಯೋಜಕರಾದ ಚನ್ನವೆಂಕಟರಮಣಪ್ಪ ಅವರು ನ್ಯಾಯಾಲಯದ ಮುಂದೆ ಸೂಕ್ತ ವಾದ ಮಂಡಿಸಿ ಆರೋಪಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಪರಾಧಿ ಹಿನ್ನೆಲೆ: ಅಪರಾಧಿ ಆನಂದ್‍ಗೆ ಇಬ್ಬರು ಹೆಂಡತಿಯರಿದ್ದು, ಮೊದಲ ಹೆಂಡತಿಗೆ ಇಬ್ಬರು ಮಕ್ಕಳು, ಎರಡನೆ ಹೆಂಡತಿಗೆ ಒಂದು ಹೆಣ್ಣು ಮಗು ಇದೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا