Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಚಿತ್ರದುರ್ಗ: 08 ಜುಲೈ (ಫಿಕ್ರೋಖಬರ್ ಸುದ್ದಿ) ಎಂಬಿಬಿಎಸ್ ದ್ವಿತೀಯ ವರ್ಷದ ಮೈಕ್ರೋ ಬಯಾಲಜಿ-1 ಪ್ರಶ್ನೆಪತ್ರಿಕೆ ಬಹಿರಂಗಗೊಂಡಿದೆ. ನಗರದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ
ಕೇಂದ್ರದಲ್ಲಿ ಶನಿವಾರ ಪರೀಕ್ಷೆ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರಶ್ನೆಪತ್ರಿಕೆ ಬಹಿರಂಗಗೊಂಡಿದೆ.
ಈ ಪ್ರಶ್ನೆಪತ್ರಿಕೆ ವಾಟ್ಸ್ಅಪ್ ಸೇರಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ದ್ವಿತೀಯ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳ ಪರೀಕ್ಷೆ ಶನಿವಾರ ಬೆಳಗ್ಗೆ 9 ಗಂಟೆಗೆ ರಾಜ್ಯಾದ್ಯಂತ ಆರಂಭವಾಗಿತ್ತು. ಪರೀಕ್ಷೆ ಶುರುವಾಗಿ 10 ನಿಮಿಷದ ಬಳಿಕ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ಈ ಪ್ರಶ್ನೆಪತ್ರಿಕೆ ಚಿತ್ರದುರ್ಗದಲ್ಲಿ ಬಹಿರಂಗವಾಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಪ್ರಕರಣದಲ್ಲಿ ಚಿತ್ರದುರ್ಗದ ಮೆಡಿಕಲ್ ಕಾಲೇಜಿನ ವೈದ್ಯರು, ಸಿಬ್ಬಂದಿ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಬಸವೇಶ್ವರ ವೈದ್ಯಕೀಯ ಕಾಲೇಜು ಪರೀಕ್ಷಾಂಗ ವಿಭಾಗದ ಮುಖ್ಯಸ್ಥ ಡಾ| ಪ್ರಶಾಂತ್ ಕೂಡ ಬಯಲಾಗಿರುವ ಪ್ರಶ್ನೆಪತ್ರಿಕೆ ಹಾಗೂ ಅಸಲಿ ಪ್ರಶ್ನೆಪತ್ರಿಕೆ ಒಂದೇ ಆಗಿವೆ ಎಂದು ದೃಢಪಡಿಸಿದ್ದಾರೆ. ಆದರೆ, ನಮ್ಮ ಕಾಲೇಜಿನಲ್ಲಿ ಯಾವುದೇ ಕಾರಣಕ್ಕೂ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿಲ್ಲ. ಎಲ್ಲಿ ಬಯಲಾಗಿದೆ ಎಂಬುದು ತಮಗೆ ಗೊತ್ತಿಲ್ಲ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |