Urdu   /   English   /   Nawayathi

ಖಾಸಗಿ ಶಸ್ತ್ರಾಸ್ತ್ರ ಪರವಾನಗಿ ಹಿಂಪಡೆಯಲು ಜಮ್ಮು-ಕಾಶ್ಮೀರ ಸರ್ಕಾರ ನಿರ್ಧಾರ

share with us
ಶ್ರೀನಗರ: 15 ಜುಲೈ (ಫಿಕ್ರೋಖಬರ್ ಸುದ್ದಿ) ಖಾಸಗಿ ಶಸ್ತ್ರಾಸ್ತ್ರ ಪರವಾನಗಿ ಹಿಂಪಡೆಯಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಭಾನುವಾರ ತಿಳಿದುಬಂದಿದೆ. ಶಸ್ತ್ರಾಸ್ತ್ರ ಮಸೂದೆ 2016ರ ಅಡಿಯಲ್ಲಿ ಜನವರಿ, 1 2017ರಿಂದ ಫೆಬ್ರವರಿ 23,2018ರ ಅವಧಿಯಲ್ಲಿ ನೀಡಲಾಗಿರುವ ಎಲ್ಲಾ ಶಸ್ತ್ರಾಸ್ತ್ರ ಪರವಾನಗಿಗಳನ್ನು ಹಿಂದಕ್ಕೆ ಪಡೆಯಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದ್ದು, ಮುಂದಿನ ಆದೇಶದವರೆಗೂ ಹೊಸದಾಗಿ ನೀಡಲಾಗುತ್ತಿರುವ ಪರವಾನಗಿಗಳನ್ನೂ ಕೂಡ ನಿಷೇಧ ಮಾಡುವ ಕುರಿತಂತೆ ಚರ್ಚೆಗಳನ್ನು ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ. 

ಈ ಕುರಿತಂತೆ ಆದೇಶ ಹೊರಡಿಸಿರುವ ಜಮ್ಮು ಮತ್ತು ಕಾಶ್ಮೀರದ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಖಾಸಗಿಯಾಗಿ ಶಸ್ತ್ರಾಸ್ತ್ರಗಳನ್ನು ಖರೀದಿ ಮಾಡಲು ಹೊಸದಾಗಿ ಪರವಾನಗಿ ನೀಡದಂತೆ ಜಿಲ್ಲಾ ಮ್ಯಾಜಿಸ್ಟ್ರೇಟರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ. 

ಈ ಸಂಬಂಧ ತನಿಖೆ ನಡೆಸುವ ಹಾಗೂ ಮುಂದಿನ ಕ್ರಮ ಕೈಗೊಳ್ಳುವ ಕುರಿತಂತೆ ಸ್ಟೇಟ್ ವಿಜಿಲ್ಯಾನ್ಸ್ ಆರ್ಗನೈಸೇಷನ್ (ಎಸ್'ವಿಒ)ಗೆ ಅಧಿಕಾರ ನೀಡಲಾಗಿದೆ. 1 ತಿಂಗಳೊಳಗೆ ವಿಭಾಗೀಯ ಆಯುಕ್ತರೂ ಸಹ ಈ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆಯೂ ಇಲಾಖೆ ಆದೇಶಿಸಿದೆ. ಜಿಲ್ಲಾಧಿಕಾರಿಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ಎಚ್ಚರಿಗೆ ನೀಡಿದೆ ಎಂದು ಹೇಳಲಾಗುತ್ತಿದೆ. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا