Urdu   /   English   /   Nawayathi

ಸ್ಟೇರಿಂಗ್ ಲಾಕ್ ಆಗಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಟೆಂಪೋ

share with us

ಮೈಸೂರು: 30 ಜುಲೈ (ಫಿಕ್ರೋಖಬರ್ ಸುದ್ದಿ) ಟೊಮ್ಯಾಟೋ ತುಂಬಿಕೊಂಡು ಬರುತ್ತಿದ್ದ ಗೂಡ್ಸ್ ಟೆಂಪೋದ ಸ್ಟೇರಿಂಗ್ ಲಾಕ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನವು ಕಾಂಪೌಂಡ್‍ಗೆ ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ರಾತ್ರಿ ಮೈಸೂರಿಗೆ ಟೊಮ್ಯಾಟೋ ತರಲಾಗುತ್ತಿತ್ತು. ಈ ಸಂದರ್ಭದಲ್ಲಿ ಮೈಸೂರು-ಹುಣಸೂರು ಮುಖ್ಯರಸ್ತೆಯಲ್ಲಿ ಬರುತ್ತಿದ್ದಂತೆ ಸ್ಟೇರಿಂಗ್ ಲಾಕ್ ಆಗಿದೆ.

ಪರಿಣಾಮವಾಗಿ ಕಾಂಪೌಂಡ್‍ಗೆ ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಚಾಲಕ ಮತ್ತು ಕ್ಲೀನರ್ ಗಂಭೀರ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕೆಆರ್‍ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿವಿ ಪುರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا