Urdu   /   English   /   Nawayathi

ಕೇರಳ ಜಲಪ್ರಳಯ : 100 ತಲುಪಿದ ಮೃತರ ಸಂಖ್ಯೆ, ಮತ್ತಷ್ಟು ಹೆಚ್ಚಾಗುವ ಸಾಧ್ಯತೆ..!

share with us

ನವದೆಹಲಿ: 16 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ದೇವರ ನಾಡು ಕೇರಳ ಶತಮಾನದಲ್ಲೇ ಕಂಡು ಕೇಳರಿಯದ ಜಲಪ್ರಳಯದಿಂದ ನಲುಗಿದೆ. ಒಂದೇ ದಿನದಲ್ಲಿ ಸತ್ತವರ ಸಂಖ್ಯೆ 100ಕ್ಕೇರಿದೆ. ಭೀಕರ ಪ್ರಕೃತಿ ವಿಕೋಪಗಳಿಗೆ ಹಲವರು ಕಣ್ಮರೆಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.  ಪಾಲಕ್ಕಾಡ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಐವರು ಮೃತಪಟ್ಟಿದ್ದು, ಇಬ್ಬರನ್ನು ರಕ್ಷಿಸಲಾಗಿದೆ ಎಂದು ವಿಪತ್ತು ನಿರ್ವಹಣೆ ಕಾರ್ಯಾಚರಣೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಿನ್ನೆ ಒಂದೇ ದಿನ ರಾಜ್ಯದ ವಿವಿಧೆಡೆ ಜಲಪ್ರಳಯದಿಂದ 25ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ನಿರಂತರ ಮಳೆ, ಪ್ರವಾಹ ಮತ್ತು ಭೂಕುಸಿತಗಳಿಂದ ಕೇರಳ ಜನತೆ ಕಂಗಾಲಾಗಿದ್ದು, ರೈಲು ಮತ್ತು ವಿಮಾನಗಳ ಸಂಚಾರ ಸ್ಥಗಿತಗೊಂಡಿದೆ. ರಾಜ್ಯದ 14 ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.  ನದಿಗಳು, ಉಪ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿ ರಾಜ್ಯದಲ್ಲಿನ 35ಕ್ಕೂ ಹೆಚ್ಚು ಜಲಾಶಯಗಳ ಎಲ್ಲ ಗೇಟ್‍ಗಳನ್ನು ತೆರೆಯಲಾಗಿದೆ. ಕೇರಳದಲ್ಲಿನ ಭೀಕರ ನೆರೆ ಹಾವಳಿ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಾದ್ಯಂತ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಕ್ಷಿಪ್ರವಾಗಿ ಕೈಗೊಳ್ಳುವಂತೆ ರಕ್ಷಣಾ ಸಚಿವಾಲಯಕ್ಕೆ ಸೂಚನೆ ನೀಡಿದ್ದಾರೆ.

ಇಂದು ಬೆಳಗ್ಗೆ ಪ್ರಧಾನಿ ಮೋದಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮತ್ತೆ ದೂರವಾಣಿ ಮೂಲಕ ಮಾತನಾಡಿ. ಅಗತ್ಯವಾದ ಎಲ್ಲ ನೆರವಿನ ಭರವಸೆ ನೀಡಿದ್ದಾರೆ.  ಕೇರಳದಲ್ಲಿ ತಲೆದೋರಿರುವ ಜಲಪ್ರಳಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ, ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಉದಾರ ದೇಣಿಗೆ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಜನರಲ್ಲಿ ಮನವಿ ಮಾಡಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا