Urdu   /   English   /   Nawayathi

ರಮೇಶ್ ಎಲ್ಲಿದ್ದಾರೋ ಗೊತ್ತಿಲ್ಲ ಎಂದ ಸತೀಶ್

share with us

ಬೆಂಗಳೂರು: 30 ಜನುವರಿ (ಫಿಕ್ರೋಖಬರ್ ಸುದ್ದಿ) ಗೋಕಾಕ್ ಶಾಸಕ ರಮೇಶ್ ಜಾರಕಿ ಹೊಳಿ ಎಲ್ಲಿದ್ದಾ ರೆಂಬುದು ನನಗೆ ಗೊತ್ತಿಲ್ಲ. ಗೋಕಾಕ್‍ನಲ್ಲೂ ಇಲ್ಲ, ನನ್ನ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ಸಚಿವ ಸತೀಶ್ ಜಾರಕಿ ಹೊಳಿ ಹೇಳಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ನನ್ನ ಸಹೋದರನೇ ಆದರೂ ಕೂಡ ನಮ್ಮಿಬ್ಬರ ವ್ಯವಹಾರ ಬೇರೆ ಬೇರೆ. ಅವರನ್ನು ಯಾರೂ ಬಲವಂತವಾಗಿ ಹಿಡಿದಿಟ್ಟಿಲ್ಲ. ಅವರು ಸ್ವಯಂಪ್ರೇರಿತವಾಗಿ ಹೋಗಿರಬಹುದು ಎಂದು ಹೇಳಿದರು. ಅವರಿಗೆ ಶೋಕಾಸ್ ನೋಟೀಸ್ ನೀಡಿರುವುದರಿಂದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಬಹುದು ಎಂದರು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا