Urdu   /   English   /   Nawayathi

ಸೀಮಾಂಚಲ ಎಕ್ಸ್ ಪ್ರೆಸ್ ರೈಲು ದುರಂತ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ರೈಲ್ವೇ ಇಲಾಖೆ

share with us

ನವದೆಹಲಿ: 03 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಬಿಹಾರದಲ್ಲಿ ಹಳಿ ತಪ್ಪಿದ ಸೀಮಾಂಚಲ ಎಕ್ಸ್ ಪ್ರೆಸ್ ರೈಲು ದುರಂತಕ್ಕೆ ಸಂಬಂಧಿಸಿದಂತೆ ಭಾರತೀಯ ರೈಲ್ವೇ ಇಲಾಖೆ ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ನೀಡುವುದಾಗಿ ಘೋಷಣೆ ಮಾಡಿದೆ. ಈ ಬಗ್ಗೆ ಅಧಿಕೃತ ಮಾಧ್ಯಮ ಪ್ರಕಟಣೆ ಹೊರಡಿಸಿರುವ ರೈಲ್ವೇ ಇಲಾಖೆ, ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ 5 ಲಕ್ಷ ರೂ ಪರಿಹಾರ ನೀಡುವುದಾಗಿ ಹೇಳಿದೆ. ಅಂತೆಯೇ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ತಲಾ 1 ಲಕ್ಷ ರೂ ಹಾಗೂ ಸಾಮಾನ್ಯ ಗಾಯಗಳಾಗಿರುವವರಿಗೆ ತಲಾ 50 ಸಾವಿರ ರೂ ನೀಡುವುದಾಗಿ ಹೇಳಿದೆ. ಅಂತೆಯೇ ಗಾಯಾಳುಗಳ ಚಿಕಿತ್ಸೆಯ ಮೇಲ್ವಿಚಾರಣೆಯನ್ನೂ ನೋಡಿಕೊಳ್ಳುವುದಾಗಿ ಪ್ರಕಟಿಸಿದೆ. ಇಂದು ಮುಂಜಾನೆ ದೆಹಲಿಯತ್ತ ಪ್ರಯಾಣಿಸುತ್ತಿದ್ದ ಸೀಮಾಂಚಲ ಎಕ್ಸ್ ಪ್ರೆಸ್ ರೈಲು ಬಿಹಾರದ ವೈಶಾಲಿಯಲ್ಲಿ ಹಳಿ ತಪ್ಪಿತ್ತು. ರೈಲಿನ ಬರೊಬ್ಬರಿ 9 ಬೋಗಿಗಳು ನೆಲಕ್ಕುರುಳಿ ಘಟನೆಯಲ್ಲಿ 7 ಮಂದಿ ಪ್ರಯಾಣಿಕರು ಸಾವನ್ನಪ್ಪಿ ಹಲವಾರು ಮಂದಿ ಗಾಯಗೊಂಡಿದ್ದರು.

#SeemachalExpress : Railways would give ex-gratia of Rs 5 lakhs each to the kin of every deceased. Rs. 1 lakh would be given to the grievously injured and Rs. 50,000 to those who suffered minor injuries. All medical expenses will also be borne by Railways

— ANI (@ANI) February 3, 2019

 ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا