Urdu   /   English   /   Nawayathi

ನರೇಂದ್ರ ಮೋದಿ ಪಾಕಿಸ್ತಾನದ ಪ್ರಧಾನಿಯಂತೆ ವರ್ತಿಸುತ್ತಿದ್ದಾರೆ: ಅರವಿಂದ್ ಕೇಜ್ರಿವಾಲ್

share with us

ನವದೆಹಲಿ: 11 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ವಿಭಜಿತ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿರುವ ದೆಹಲಿ ಮಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ಮೋದಿ ಪಾಕಿಸ್ತಾನದ ಪ್ರಧಾನಿಯಂತೆ ವರ್ತಿಸುತ್ತಿದ್ದಾರೆ ಎಂದರು. ನರೇಂದ್ರ ಮೋದಿ ಯಾವುದೇ ಪಕ್ಷದ ಪ್ರಧಾನಮಂತ್ರಿಯಲ್ಲ ಈ ದೇಶದ ಪ್ರಧಾನಮಂತ್ರಿ. ಅವರು ಇತರ ರಾಜ್ಯಗಳಲ್ಲಿ ವಿರೋಧ ಪಕ್ಷದ ಸರ್ಕಾರವನ್ನು ಪರಿಗಣಿಸುವುದನ್ನು ನೋಡಿದರೆ ಅವರು ಭಾರತದ ಪ್ರಧಾನಿಯಲ್ಲ. ಪಾಕಿಸ್ತಾನದ ಪ್ರಧಾನಿಯಂತೆ ವರ್ತಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ವಿಶೇಷ ಸ್ಥಾನಮಾನಕ್ಕಾಗಿ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಜ್ಯವನ್ನು ಬಿಟ್ಟು ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದು ಇದನ್ನು ನೋಡಿದರೆ ತುಂಬಾ ದುಃಖವಾಗುತ್ತದೆ. ಇವುಗಳೆಲ್ಲವನ್ನು ನೋಡಿದರೆ ದೇಶದಲ್ಲಿ ಫೆಡರಲ್ ರಚನೆಯ ಬಗ್ಗೆ ಪ್ರಶ್ನೆಗಳು ಮೂಡುತ್ತದೆ ಎಂದರು. ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಮೋದಿ ಸಾರ್ವಜನಿಕವಾಗಿ ಘೋಷಿಸಿದ್ದರು. ಆದರೆ ಇದೀಗ ಜಾಗತಿಕ ಮಟ್ಟದಲ್ಲಿ ಶುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದು ಹೇಳಿದರು.

Embedded video

AAP✔@AamAadmiParty

मोदी जी को यह समझना चाहिए कि वो सिर्फ भाजपा के प्रधानमंत्री नहीं है, पूरे देश के प्रधानमंत्री हैं। प्रधानमंत्री दूसरे पार्टियों से इस तरह का व्यवहार करते हैं, जैसे वह भारत के नहीं बल्कि पाकिस्तान के प्रधानमंत्री हों।:@ArvindKejriwal

614

2:35 PM - Feb 11, 2019

352 people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا