Urdu   /   English   /   Nawayathi

ಭುವನೇಶ್ವರ್‌: ಹೊತ್ತಿ ಉರಿದ ರಾಜಧಾನಿ ಎಕ್ಸ್ ಪ್ರೆಸ್ ರೈಲು, ಪ್ರಯಾಣಿಕರು ಪಾರು

share with us

ಭುವನೇಶ್ವರ್‌: 12 ಮೇ (ಫಿಕ್ರೋಖಬರ್ ಸುದ್ದಿ) ದೆಹಲಿ-ಭುವನೇಶ್ವರ್‌ ನಡುವೆ ಸಂಚರಿಸುವ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ಪ್ರಯಾಣಿಕರು ಯಾವುದೇ ಹಾನಿ ಇಲ್ಲದೆ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗಿನ ಮಧ್ಯಾಹ್ನ 12.50 ರಿಂದ 1 ಗಂಟೆ ವೇಳೆ ರೈಲಿನ ಕೊನೆಯಲ್ಲಿರುವ ಜನರೇರ್ಟ್‌ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ರೈಲನ್ನು ನಿಲ್ಲಿಸಿ ಬೇರೆ ಬೋಗಿಗಳನ್ನು ಬೇರ್ಪಡಿಸಿ ಬೆಂಕಿ ಇತರೆ ಬೋಗಿಗಳಿಗೆ ವ್ಯಾಪಿಸುವುದನ್ನು ತಡೆಯಲಾಗಿದೆ. ಖರಗಪುರದ ವಿಭಾಗದಲ್ಲಿ ಖಂತಪಡದಲ್ಲಿ ಈ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಅವಘಡದಲ್ಲಿ ಯಾರೊಬ್ಬರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ, ಪ್ರ ವರದಿ

 

Prayer Timings

Fajr فجر
Dhuhr الظهر
Asr أسر
Maghrib مغرب
Isha عشا