Urdu   /   English   /   Nawayathi

ಸಿಎಂ ಕುಮಾರಸ್ವಾಮಿ ಬಳಿ ಬಂದು ಸಹಾಯ ಕೇಳಿದ ವಿಕಲಚೇತನ ಮಹಿಳೆ..ಮುಂದೇನಾಯ್ತು ನೀವೇ ನೋಡಿ..!

share with us

ಬೆಂಗಳೂರು: 03 ಜೂನ್ 2019 (ಫಿಕ್ರೋಖಬರ್ ಸುದ್ದಿ) ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಮಾಯಕ್ಕ ಎಂಬ ವಿಕಲಚೇತನ ಮಹಿಳೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ವಯಂ ಉದ್ಯೋಗ ಕೈಗೊಳ್ಳಲು 50 ಸಾವಿರ ರೂ.ಗಳ ಚೆಕ್ ವಿತರಿಸಿದರು. ಮಾಯಕ್ಕನ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ವಿದ್ಯಾರ್ಥಿನಿಲಯದಲ್ಲಿ ಪ್ರವೇಶ ನೀಡಲು ವ್ಯವಸ್ಥೆ ಮಾಡಲು ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿಯವರಗೆ ಮುಖ್ಯಮಂತ್ರಿಗಳು ಸೂಚಿಸಿದರು.

ಸಾಲು ಮರದ ತಿಮ್ಮಕ್ಕನ ಮನವಿಗೆ ಸ್ಪಂದನೆಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿದರು. ಬಾಗೇಪಲ್ಲಿ- ಹಲಗೂರು ಮಾರ್ಗದಲ್ಲಿ ರಾಜ್ಯ ಹೆದ್ದಾರಿ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಮಾಗಡಿ ತಾಲ್ಲೂಕಿನ ಕುದೂರು ಗ್ರಾಮದಲ್ಲಿ ರಸ್ತೆ ಬದಿಯ ಮರಗಳನ್ನು ಕಡಿಯಲು ಮುಂದಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು, ರಸ್ತೆ ಬದಿಯ ಮರಗಳನ್ನು ಕಡಿಯದಂತೆ ಸೂಚಿಸಿದರು. ಅಗತ್ಯ ಬಿದ್ದಲ್ಲಿ ರಸ್ತೆಯ ಮಾರ್ಗವನ್ನು ಬದಲಿಸುವಂತೆ ಸೂಚಿಸಿದರು.  ಇದೇ ಸಂದರ್ಭದಲ್ಲಿ ತಮ್ಮ ಗ್ರಾಮದಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಮನವಿ ಸಲ್ಲಿಸಿದರು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا