Urdu   /   English   /   Nawayathi

Latest News:

Latest News:

ಮುಳ್ಳಯ್ಯನ ಗಿರಿಯಲ್ಲಿ ಭಾರಿ ಅಪಘಾತ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಕಾರು

share with us

ಚಿಕ್ಕಮಗಳೂರು: 18 ಜೂನ್ 2019 (ಫಿಕ್ರೋಖಬರ್ ಸುದ್ದಿ) ಪ್ರವಾಸಿಗರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ತಾಲೂಕಿನ ಮುಳ್ಳಯ್ಯನ ಗಿರಿಯಲ್ಲಿ ನಡೆದಿದೆ. ಮುಳ್ಳಯ್ಯನ ಗಿರಿಗೆ ಹೋಗುವ ಎರಡನೇ ತಿರುವಿನಲ್ಲಿ ಕಾರು ಪ್ರಪಾತಕ್ಕೆ ಉರುಳಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಚಾಲಕ ಸೇರಿ ನಾಲ್ಕು ಜನರಿಗೆ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ ಸ್ಥಳದಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಇನ್ನು ಕಾರು ಚಾಲಕ ಮಹೇಂದ್ರ ಸ್ಥಿತಿ ಗಂಭೀರವಾಗಿದ್ದು, ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا