Urdu   /   English   /   Nawayathi

ಸಾಲಮನ್ನಾ ಯೋಜನೆ ಘೋಷಿಸಿದ ಬಳಿಕ ರಾಜ್ಯದಲ್ಲಿ 759 ರೈತರ ಆತ್ಮಹತ್ಯೆ

share with us

ಬೆಂಗಳೂರು: 16 ಜುಲೈ 2019 (ಫಿಕ್ರೋಖಬರ್ ಸುದ್ದಿ) ರಾಜ್ಯದಲ್ಲಿ ರೈತರಿಗೆ ಸಾಲ ಮನ್ನಾ ಯೋಜನೆ ಘೋಷಣೆಯಾದ ಬಳಿಕ ಇಲ್ಲಿಯವರೆಗೆ ಒಟ್ಟು 758 ರೈತರ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 151 ಪ್ರಕರಣಗಳನ್ನು ತಿರಸ್ಕರಿಸಲಾಗಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಖಾಶೆಂಪೂರ ಅವರು ಮಂಗಳವಾರ ವಿಧಾನ ಪರಿಷತ್ಗೆ ತಿಳಿಸಿದ್ದಾರೆ. ಇಂದು ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯರಾದ ಎನ್.ರವಿಕುಮಾರ್ ಮತ್ತು ತೇಜಸ್ವಿನಿಗೌಡ ಅವರ ಚುಕ್ಕೆಗುರತಿನ ಪ್ರಶ್ನೆಗೆ ಉತ್ತರಿಸಿದ ಅವರು, ರೈತರ ಆತ್ಮಹತ್ಯೆ ಕುರಿತು ಅಧ್ಯಯನ ನಡೆಸಲು 2001 ರಲ್ಲಿ ಸರ್ಕಾರ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ನಿವೃತ್ತ ಕುಲಪತಿ ಡಾ.ಈ.ಕೆ.ವೀರೇಶ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿತ್ತು. ಸಮಿತಿಯು ರೈತರ ಆರ್ಥಿಕ ಪರಿಸ್ಥಿತಿ ಸಾಮಾಜಿಕ ಮತ್ತು ಸಾಂಸಾರಿಕ ಸಮಸ್ಯೆಗಳು ಸಾಮರ್ಥ್ಯಕ್ಕೆ ಮೀರಿ ಮಾಡಿದ ಸಾಲ, ಬೆಳೆ ನಷ್ಟ ಮುಂತಾದವು ರೈತರ ಆತ್ಮಹತ್ಯೆಗೆ ಕಾರಣಗಳು ಎಂದು ವರದಿಯಲ್ಲಿ ಹೇಳಿದ್ದರು ಎಂದರು. ರಾಜ್ಯದ ಸಹಕಾರ ಸಂಘಗಳಲ್ಲಿ ಒಂದು ಲಕ್ಷ ರೂ.ಗಳವರೆಗಿನ ಬೆಳೆ ಸಾಲ ಮನ್ನಾ ಯೋಜನೆಯಲ್ಲಿ ಇದುವರೆಗೆ 8,91,989 ರೈತರಿಗೆ 3,860.32 ಕೋಟಿ ರೂ. ಸಾಲ ಮನ್ನಾ ಅನುದಾನ ಬಿಡುಗಡೆ ಮಾಡಲಾಗಿದ್ದು, ವಾಣಿಜ್ಯ ಬ್ಯಾಂಕುಗಳಲ್ಲಿ ರೈತರ ಸಾಲಮನ್ನಾಕ್ಕೆ ಸಂಬಂಧಿಸಿದಂತೆ ಇದುವರೆಗೆ ರೈತರ ಖಾತೆಗಳಿಗೆ 5,297.31 ಕೋಟಿ ರೂ. 32 ರಾಷ್ಟ್ರೀಕೃತ ಬ್ಯಾಂಕುಗಳಿಗೆ ಹಣ ಬಿಡುಗಡೆಯಾಗಿದೆ ಎಂದು ಸಚಿವರು ತಿಳಿಸಿದರು.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا