Urdu   /   English   /   Nawayathi

ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಕಲ್ಯಾಣ್ ಸಿಂಗ್‍ಗೆ ಕೋರ್ಟ್ ಸಮನ್ಸ್

share with us

ಲಕ್ನೋ: 22 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಉತ್ತರ ಪ್ರದೇಶದ ಆಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಧುರೀಣ ಕಲ್ಯಾಣ್ ಸಿಂಗ್(87) ಅವರಿಗೆ ಕೇಂದ್ರೀಯ ತನಿಖಾ ದಳ-ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಸಿಂಗ್‍ಗೆ ಮತ್ತೆ ಕಾನೂನು ಕಂಟಕ ಎದುರಾಗಿದೆ. ಸೆ.27ರಂದು ತನ್ನ ಮುಂದೆ ವಿಚಾರಣೆಗಾಗಿ ಹಾಜರಾಗುವಂತೆ ವಿಶೇಷ ನ್ಯಾಯಾಲಯವು ಸಿಂಗ್ ಅವರಿಗೆ ಸೂಚಿಸಿದೆ. ಆಯೋಧ್ಯೆಯ ವಿವಾದಿತ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಸ್ಥಳದಲ್ಲಿದ್ದ ಮಸೀದಿಯನ್ನು ಕೆಡವಿದ ಪ್ರಕರಣದಲ್ಲಿ ಒಳಸಂಚು ರೂಪಿಸಿದರೆನ್ನಲಾದ ಆರೋಪಗಳ ಸಂಬಂಧ ನ್ಯಾಯಾಲಯವು ಬಿಜೆಪಿ ಧುರೀಣರಾದ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ, ಕೇಂದ್ರದ ಮಾಜಿ ಸಚಿವರಾದ ಉಮಾ ಭಾರತಿ ಮತ್ತು ಇತರರ ವಿರುದ್ಧ ವಿಚಾರಣೆ ನಡೆಸುತ್ತಿದೆ. ರಾಜಸ್ತಾನ ರಾಜ್ಯಪಾಲರಾಗಿದ್ದ ಕಲ್ಯಾಣ್ ಸಿಂಗ್ ಅವರ ಅವಧಿಯು ಈ ತಿಂಗಳ ಮೊದಲ ವಾರ ಮುಗಿದಿದೆ ಎಂದು ವಕೀಲರ ಸಂಘದ ಸದಸ್ಯರಿಂದ ನೀಡಲಾದ ಮಾಹಿತಿಯನ್ನು ಗಣನೆಗೆ ತೆಗೆದುಕೊಂಡ ವಿಶೇಷ ನ್ಯಾಯಾಧೀಶ ಎಸ್.ಕೆ.ಯಾದವ್ ನಿನ್ನೆ ಸಮನ್ಸ್ ಜಾರಿಗೊಳಿಸಿ ಸೆ.27ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا