Urdu   /   English   /   Nawayathi

ವಿಜಯಪುರ ಬಳಿ ಸಾರಿಗೆ ಸಂಸ್ಥೆ ಬಸ್ ಪಲ್ಟಿ.. ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

share with us

ವಿಜಯಪುರ: 16 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಬಾಲಕ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕಿನ ಬಳಗಾನೂರ ಗ್ರಾಮದ ಹತ್ತಿರ ನಡೆದಿದೆ. ವಿಜಯಪುರದಿಂದ ತಾಳಿಕೋಟಿಗೆ ಬರುತ್ತಿದ್ದ ಕೆಎ 28 ಎಫ್‌2087 ನಂಬರಿನ ಸಾರಿಗೆ ಸಂಸ್ಥೆ ಬಸ್​ ಅಪಘಾತಕ್ಕೀಡಾಗಿದೆ. ಎಕ್ಸೆಲ್ ಸೂಪರ್ ಬೈಕ್​ನಲ್ಲಿ ಹೊರಟ್ಟಿದ್ದ ಇಬ್ಬರು ಬಾಲಕರು ರಸ್ತೆ ಮಧ್ಯೆ ಬಂದಿದ್ದರಿಂದ ಅದನ್ನು ತಪ್ಪಿಸಲು ಹೋದ ಸಾರಿಗೆ ಸಂಸ್ಥೆ ಬಸ್ ಚಾಲಕ ಅಪಘಾತ ಮಾಡಿದ್ದಾನೆ. ಈ ಸಂದರ್ಭದಲ್ಲಿ ಬಸ್‌ನ ಗಾಲಿಯೊಳಗೆ ಸಿಲುಕಿ ಬಾಲಕರಲ್ಲಿ ಒಬ್ಬ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ಬಾಲಕ ಬೀರಣ್ಣ ಪರದಾನಿ ಬೀರಗುಂಡ(೧೫) ಢವಳಗಿ ಎಂದು ಗುರುತಿಸಲಾಗಿದೆ. ಇಬ್ಬರು ಬಾಲಕರು ಸಹೋದರರಾಗಿದ್ದು, ಢವಳಗಿಯಿಂದ ಕೊಣ್ಣೂರ ಗ್ರಾಮದಲ್ಲಿರುವ ಸಹೋದರಿಯನ್ನು ಕರೆದುಕೊಂಡು ಹೋಗಲು ಬರುತ್ತಿದ್ದಾಗ ಈ ಘಟನೆ ನಡೆದಿದೆ. ಬಸ್‌ನಲ್ಲಿದ್ದ ಪ್ರಯಾಣಿಕರಲ್ಲಿ ಸುಮಾರು 10 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ತಾಳಿಕೋಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا