Urdu   /   English   /   Nawayathi

ನನ್ನ ಶವದ ಮೇಲೆ ಪೌರತ್ವ ಬಿಲ್​ ಜಾರಿ ಮಾಡಿ: ಕೇಂದ್ರದ ವಿರುದ್ಧ ಗುಡುಗಿದ ದೀದಿ!

share with us

ಕೋಲ್ಕತ್ತಾ: 17 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳ, ಅಸ್ಸೋಂ ಹಾಗೂ ನವದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಯುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಆಯಾ ರಾಜ್ಯದ ಮುಖ್ಯಮಂತ್ರಿಗಳು ಬೀದಿಗೆ ಇಳಿದು ಆಕ್ರೋಶ ಹೊರಹಾಕುತ್ತಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕುತ್ತಿದ್ದು, ಬೃಹತ್​ ಮಟ್ಟದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಮಾತನಾಡಿರುವ ಅವರು, ನೀವೂ ನನ್ನ ಸರ್ಕಾರ ಬೀಳಿಸಬಹುದು ಆದ್ರೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಲು ಬಿಡಲ್ಲ. ಒಂದು ವೇಳೆ ಅದನ್ನ ಜಾರಿ ಮಾಡಬೇಕು ಎಂದರೆ ನನ್ನ ಮೃತದೇಹದ ಮೇಲೆ ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಮತಾ ಬ್ಯಾನರ್ಜಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಜತೆಗೆ ಪೌರತ್ವ ತಿದ್ದುಪಡಿ ಕಾಯ್ದೆಯನ್ನ ಕೇಂದ್ರ ಸರ್ಕಾರ ಹಿಂಪಡೆದುಕೊಳ್ಳುವವರೆಗೂ ತಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದರ ಮಧ್ಯೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಈ ಮಸೂದೆ ವಿರುದ್ಧ ತಿರುಗಿಬಿದ್ದಿದ್ದು. ಕೇಂದ್ರ ಸರ್ಕಾರ ಸಂವಿಧಾನವನ್ನ ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದ್ದು, ಅದರ ದುರುಪಯೋಗ ಪಡೆದುಕೊಳ್ಳುತ್ತಿದೆ ಎಂದಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا