Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಹೈದರಾಬಾದ್: 25 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ದೇಶಾದ್ಯಂತ ಈಗಾಗಲೇ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಆಕ್ರೋಶ ನಡೆಯುತ್ತಿದ್ದು, ಇದರ ಮಧ್ಯೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಜಾರಿಗೊಳಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ದೇಶಾದ್ಯಂತ ವಿಪಕ್ಷಗಳು ಈ ಕಾಯ್ದೆಗಳ ವಿರುದ್ಧ ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿರುವಾಗಲೇ ನಿನ್ನೆ ಖಾಸಗಿ ಸುದ್ದಿವಾಹಿನಿಗೆ ಸಂದರ್ಶನ ನೀಡಿದ್ದ ಗೃಹ ಸಚಿವ ಅಮಿತ್ ಶಾ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ನಡುವೆ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದೀಗ ಇದೇ ವಿಷಯವಾಗಿ ಎಐಎಂಐಎಂ ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಮಾತನಾಡಿದ್ದು, ಎನ್ಪಿಆರ್ ಹಾಗೂ ಎನ್ಆರ್ಸಿ ಒಂದೇ ನಾಣ್ಯದ ಎರಡು ಮುಖ ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶದ ಜನರ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದು, ಎಲ್ಲ ಪಕ್ಷಗಳು ಇದರ ವಿರುದ್ಧ ಹೋರಾಟ ನಡೆಸುವ ಅವಶ್ಯಕತೆ ಇದೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಓವೈಸಿ, ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಯಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ಮುಂದುವರಿದ ಭಾಗವೇ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಎಂದು ತಿಳಿಸಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |