Urdu   /   English   /   Nawayathi

ವಿಜಯಪುರ: ಪಿಯುಸಿ ಪರೀಕ್ಷೆ ಆರಂಭವಾದ 1 ಗಂಟೆಯಲ್ಲೇ ಭೌತಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ

share with us

ವಿಜಯಪುರ: 04 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ಎಲ್ಲಾ ಅಗತ್ಯ ರೀತಿಯ ಕ್ರಮಗಳನ್ನು ಕೈಗೊಂಡಿದ್ದರೂ ಇಂದು ನಡೆದ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಭೌತಶಾಸ್ತ್ರ ವಿಷಯದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿತ್ತು. ಪರೀಕ್ಷೆ ಆರಂಭವಾದ ಒಂದು ಗಂಟೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಕೊಠಡಿ ಮೇಲ್ವಿಚಾರಕರು ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಿದ ಬೆನ್ನಲ್ಲೇ ಯಾರೋ ಕಿಡಿಗೇಡಿಗಳು ಮೊಬೈಲ್​ನಲ್ಲಿ ಫೋಟೋ ತೆಗೆದು ಲೀಕ್​ ಮಾಡಿದ್ದಾರೆ ಎನ್ನಲಾಗಿದೆ. ಈ ಕೃತ್ಯದಲ್ಲಿ ಕಾಲೇಜು ಸಿಬ್ಬಂದಿಯ ಕೈವಾಡವಿದೆ ಎಂದು ಶಂಕೆ ವ್ಯಕ್ತವಾಗಿದೆ. ಸೋರಿಕೆಯಾದ ಕೆಲವೇ ನಿಮಿಷಗಳಲ್ಲಿ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ. ಪರೀಕ್ಷಾ ಕೇಂದ್ರ ಸುತ್ತ ಬಿಗಿ ಭದ್ರತೆ ಇದ್ದರೂ ಸಹ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ ಭೌತಶಾಸ್ತ್ರ ಪರೀಕ್ಷೆ ನಡೆಯುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ಈ ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ಪಿಯುಸಿ ಮಂಡಳಿ ಮುಂಜಾಗ್ರತಾ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿತ್ತು. ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಭದ್ರತೆ ವಹಿಸಲಾಗಿತ್ತು. ಆದರೂ ಸಹ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ. ಈ ಬಾರಿ ಸುಮಾರು 27,359 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಅದರಲ್ಲಿ 7,984  ವಿದ್ಯಾರ್ಥಿಗಳು  ವಿಜ್ಞಾನ ಪರೀಕ್ಷೆ ತೆಗೆದುಕೊಂಡಿದ್ದಾರೆ. "ಕರ್ನಾಟಕ ಶಿಕ್ಷಣ ಕಾಯ್ದೆ 24 (ಎ) ಪ್ರಕಾರ ಇದನ್ನು ಪ್ರಶ್ನೆಪತ್ರಿಕೆ ಸೋರಿಕೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿಿ ವೈಎಸ್ ಪಾಟೀಲ್ ಹೇಳಿದ್ದಾರೆ. ಇನ್ನು ಈ ಸಂಬಂಧ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು, ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪದವಿ ಪೂರ್ವ ಮಂಡಳಿ ತಿಳಿಸಿದೆ. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا