Urdu   /   English   /   Nawayathi

ದಕ್ಷಿಣ ಕನ್ನಡ: ಈಶ್ವರಮಂಗಲ ಬಳಿ ಮನೆಯ ಕೊಟ್ಟಿಗೆ ‌ಚಾವಣಿ ಮೇಲೆ‌ ಉರುಳಿದ ಬಸ್

share with us

ಮಂಗಳೂರು: 10 ಜೂನ್ 2020 (ಫಿಕ್ರೋಖಬರ್ ಸುದ್ದಿ) ಪುತ್ತೂರಿನಿಂದ ಈಶ್ವರಮಂಗಲ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಈಶ್ವರಮಂಗಲದ ಸಮೀಪ ಸಾಂತ್ಯ ಎಂಬಲ್ಲಿ ಚಾಲಕ ನಿಯಂತ್ರಣ ತಪ್ಪಿ ಮನೆಯೊಂದರ ಕೊಟ್ಟಿಗೆಯ ಮೇಲ್ಚಾವಣಿ ಮೇಲೆ ಬಿದ್ದಿದೆ.‌ ಘಟನೆಯಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಅಲ್ಪ ಸ್ವಲ್ಪ ಗಾಯವಾಗಿದೆ. ಉಳಿದಂತೆ ಬಸ್‌ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಈಶ್ವರಮಂಗಲದ ಸಾಂತ್ಯ ಎಂಬಲ್ಲಿನ ತಿರುವಿನಲ್ಲಿ ಈ ಬುಧವಾರ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ಬಸ್ ಉರುಳಿ ಬಿದ್ದಿದೆ. ಸುಮಾರು 20 ಅಡಿಯಷ್ಟು ಕೆಳಗಿರುವ ಮನೆಯ ಕೊಟ್ಟಿಗೆಯ ಚಾವಣಿಯ ಮೇಲೆ ಸರಕಾರಿ ಬಸ್ ಉರುಳಿ ಬಿದ್ದಿದೆ. ಬಸ್ ಉರುಳಿ ಬಿದ್ದ ಜಾಗದಲ್ಲಿ ಮನೆಮಂದಿ ಯಾರೂ ಇರದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಕೋವಿಡ್ ಕಳವಳದ ಕಾರಣ ಬಸ್ ನಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇರಲಿಲ್ಲ ಎನ್ನಲಾಗಿದೆ. ಸದ್ಯ ಬಸ್ ಮೇಲೆತ್ತುವ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا